ನಿಷೇಧಿತ ಎಂಡಿಎಂಎ ಮಾರಾಟ – ಮಾದಕ ವಸ್ತು ಸಹಿತ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಓರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಪಡೆದುಕೊಂಡ ಘಟನೆ ವರದಿಯಾಗಿದೆ.

ಬಂಧಿತನನ್ನು ಉಳ್ಳಾಲ ಮುಕ್ಕಚೇರಿ ಒಂಭತ್ತುಕೆರೆ ನಿವಾಸಿ ಅಬ್ದುಲ್‌ ಸವಾಜ್‌ ಆಲಿಯಾಸ್‌ ಚವ್ವಾ(30) ಎಂದು ಗುರುತಿಸಲಾಗಿದೆ. ಆರೋಪಿ ಸವಾದ್ ಒಂಭತ್ತು ಕೆರೆ ಪರಿಸರದಲ್ಲಿ ದ್ವಿಚಕ್ರ ವಾಹನವೊಂದರಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿ ವಶದಲ್ಲಿದ್ದ ಒಟ್ಟು 25 ಗ್ರಾಂ ತೂಕದ 1,25,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಹೋಂಡಾ ಆಕ್ಟಿವಾ ಸ್ಕೂಟಿ, ಮೊಬೈಲ್‌ ಫೋನ್‌, 2,120 ರೂ. ನಗದು, ಡಿಜಿಟಲ್‌ ತೂಕ ಮಾಪನ ಸಹಿತ ಒಟ್ಟು 2,17,000 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಆರೋಪಿ ವಿರುದ್ಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read   ಡಿ. 3 ರಿಂದ 6 ರವರೆಗೆ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ

error: Content is protected !!
Scroll to Top