ನಿಂತಿದ್ದ ಬಸ್ ಗೆ ಟ್ರಕ್ ಢಿಕ್ಕಿ – 11 ಮಂದಿ ದುರ್ಮರಣ

(ನ್ಯೂಸ್ ಕಡಬ) newskadaba.com ಜೈಪುರ, ಸೆ. 13. ಡೀಸೆಲ್ ಖಾಲಿಯಾಗಿ ನಿಂತಿದ್ದ ಬಸ್‍ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 11 ಜನ ಮೃತಪಟ್ಟ ಘಟನೆ ರಾಜಸ್ಥಾನದ ಭರತ್‍ಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬಸ್ ರಾಜಸ್ಥಾನದ ಪುಷ್ಕರ್‌ನಿಂದ ಉತ್ತರ ಪ್ರದೇಶದ ವೃಂದಾವನಕ್ಕೆ ತೆರಳುತ್ತಿದ್ದ ವೇಳೆ ಡೀಸೆಲ್ ಖಾಲಿಯಾಗಿ ಲಖನ್‍ಪುರದ ಅಂಟ್ರಾ ಫ್ಲೈಓವರ್‌ ಮಧ್ಯದಲ್ಲಿ ನಿಂತಿದ್ದ ವೇಳೆ ವೇಗವಾಗಿ ಬಂದ ಟ್ರಕ್ ಬಸ್‍ಗೆ ಡಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ 11 ಮಂದಿ ಮೃತಪಟ್ಟಿದ್ದು, 12 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Also Read  ಕಡಬ: ಅನಾರೋಗ್ಯದಿಂದ ಯುವಕ ನಿಧನ

error: Content is protected !!
Scroll to Top