ಬೈಕ್ ಮತ್ತು ಬಸ್ ನಡುವೆ ಅಪಘಾತ – ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಸೆ. 13. ಬೈಕ್‌ ಮತ್ತು ಬಸ್‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ‌ ವಾಹನ ಸವಾರ ಮೃತಪಟ್ಟ ಘಟನೆ ನಂದಿಕೂರು ಮುದರಂಗಡಿ ಜಂಕ್ಷನ್ ನಲ್ಲಿ ಬುಧವಾರದಂದು ಮುಂಜಾನೆ ನಡೆದಿದೆ.

ಮೃತ ಸವಾರನನ್ನು ಕಾರ್ಕಳ ಅಜೆಕಾರು ನಿವಾಸಿ ಅಶ್ವಿತ್ ಶೆಟ್ಟಿ(24) ಎಂದು ಗುರುತಿಸಲಾಗಿದೆ. ಯೂಟ್ಯೂಬ್ ವ್ಲಾಗರ್ ಹಾಗೂ ಅಜೆಕಾರಿನ ಟೆಂಪೋ ಚಾಲಕ ಮಾಲಕರೂ ಆಗಿದ್ದ ಅಶ್ವಿತ್ ಶೆಟ್ಟಿ ಇಂದು ಅಜೆಕಾರಿನಿಂದ ಬೈಕ್ ಸರ್ವೀಸ್ ಗೆಂದು ಹೋಗುತ್ತಿದ್ದರು ಎನ್ನಲಾಗಿದೆ. ಅವಿವಾಹಿತರಾಗಿದ್ದ ಮೃತ ಅಶ್ವಿತ್ ತಾಯಿ, ಅಣ್ಣ ಹಾಗೂ ಅಕ್ಕನನ್ನು ಅಗಲಿದ್ದಾರೆ.

Scroll to Top