ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಹೋದರರು

(ನ್ಯೂಸ್ ಕಡಬ) newskadaba.com ವಿಟ್ಲ, ಸೆ 13. ಸಹೋದರರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಟ್ಲದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ಸಹೋದರರನ್ನು ಮೈರ ಮೂಲದ ಕುದ್ದುಪದವು ನಿವಾಸಿ ಪವನ್ ಹಾಗೂ ಪೃಥ್ವಿರಾಜ್ ಎಂದು ಗುರುತಸಲಾಗಿದೆ. ಅಸ್ವಸ್ಥರಿಬ್ಬರನ್ನೂ ಪ್ರತ್ಯೇಕ ತುರ್ತುವಾಹನಗಳ ಮೂಲಕ ವಿಟ್ಲ ಆಸ್ಪತ್ರೆಗೆ ಕರೆದೊಯ್ದು, ಬಳಿಕ ಸ್ಥಿತಿ ಗಂಭೀರವಾಗಿರುವ ಓರ್ವನನ್ನು ಮಂಗಳೂರು ಆಸ್ಪತ್ರೆಗೆ ಹಾಗೂ ಇನ್ನೋರ್ವನನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ಸಹೋದರರ ತಂದೆ ಮೃತಪಟ್ಟಿದ್ದು, ತಾಯಿ ಮೈರ ಎಂಬಲ್ಲಿ ವಾಸವಾಗಿದ್ದಾರೆ. ಇವರಿಬ್ಬರು ಅಜ್ಜಿ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Also Read  ವೈದ್ಯರ ಎಡವಟ್ಟು ► ಕೈ ಕಳೆದುಕೊಂಡ 8 ವರ್ಷದ ಬಾಲಕಿ..!!!

error: Content is protected !!
Scroll to Top