ರಾಜ್ಯ ಮಟ್ಟದ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಸೆ. 28ರಂದು ಆಚರಿಸುವ ಸಲುವಾಗಿ ಪರಿಶಿಷ್ಟ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿಯವರ ಹೆಸರಿನಲ್ಲಿ ರಾಜ್ಯ ಮಟ್ಟದ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆಗಳು:- ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆಯಾಗುವ ವ್ಯಕ್ತಿಯು ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸೇರಿದವರಾಗಿರಬೇಕು. ಹಾಗೂ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಆಯಾ ತಾಲೂಕಿನ ಸಹಾಯಕ ನಿರ್ದೇಶಕರು (ಗ್ರೇಡ್- 1&2), ಸಮಾಜ ಕಲ್ಯಾಣ ಇಲಾಖೆ, ಆಥವಾ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಈ ಕಚೇರಿಯಿಂದ ಪಡೆದು ಸೆ.30 ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2451269 ಅನ್ನು ಸಂಪರ್ಕಿಸುವಂತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ತಿರುವನಂತಪುರ - ಕಾಸರಗೋಡು ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲು ಮಂಗಳೂರಿಗೆ ವಿಸ್ತರಣೆ

error: Content is protected !!
Scroll to Top