ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಉಪನಿರ್ದೇಶಕರ ಹುದ್ದೆಗಳಿಗೆ ನೇರ ನೇಮಕಾತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ಉಪನಿರ್ದೇಶಕರ ಆರು ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.


ಭೂಸೇನೆಯಲ್ಲಿ ಮೇಜರ್ /ಲೆಫ್ಟಿನೆಂಟ್ ಕರ್ನಲ್ ಹಾಗೂ ನೌಕಾಸೇನೆ, ವಾಯುಸೇನೆ ತತ್ಸಮಾನ ರ್ಯಾಂಕಿಂಗ್‍ ಗಳಿಂದ ನಿವೃತ್ತಿ ಹೊಂದಿದ ಅಧಿಕಾರಿಗಳು, 2024 ಜನವರಿ 1ರಂದು 52 ವರ್ಷ ಮೀರಿರದವರು ಹಾಗೂ ಪದವೀಧರರಾಗಿದ್ದು, 10ನೇ ತರಗತಿಯಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿ ತೇರ್ಗಡೆಯಾದವರು ಅಭ್ಯರ್ಥಿಗಳು ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಈ ಕಚೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಸೆ. 20ರೊಳಗೆ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ದೂರವಾಣಿ ಸಂಖ್ಯೆ: 080-25589459 ಅನ್ನು ಸಂಪರ್ಕಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ತ್ಯಾಜ್ಯ ವಾಹನದಲ್ಲಿ ಜೀವಂತ ನಾಯಿ ಸಾಗಾಟ - ಚಾಲಕನಿಗೆ ಎಚ್ಚರಿಕೆ ನೀಡಿದ ಪಾಲಿಕೆ

error: Content is protected !!
Scroll to Top