ಗಣೇಶೋತ್ಸವ ಆಚರಣೆ ಹಿನ್ನೆಲೆ- ಶಾಂತಿ ಮತ್ತು ಸಮನ್ವಯ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಜಿಲ್ಲೆಯಾದ್ಯಂತ ಸೆ. 19ರಂದು ಗಣೇಶೋತ್ಸವ ಆಚರಣೆ ಹಿನ್ನೆಲೆ ಕಾನೂನು ವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಸೆ.14ರ ಗುರುವಾರ ಮಧ್ಯಾಹ್ನ 3 ಗಂಟೆಗೆ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶಾಂತಿ ಮತ್ತು ಸಮನ್ವಯ ಸಭೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top