ದ.ಕ. ಜಿಲ್ಲಾ ಪರಿಷತ್ ಮಾಜಿ ಅಧ್ಯಕ್ಷ ಬೆಳ್ಳಿಪ್ಪಾಡಿ ಸಂಕಪ್ಪ ರೈ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ.07. ಕಾಂಗ್ರೆಸ್ ನ ಹಿರಿಯ ಮುಖಂಡ ದಕ್ಷಿಣ ಕನ್ನಡ ಜಿಲ್ಲಾ ಪರಿಷತ್ ಮಾಜಿ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಸಂಕಪ್ಪ ರೈ(85) ಬುಧವಾರದಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದ ಕೆಲ ಸಮಯಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರದಂದು ಅವರು ಆಸ್ಪತ್ರೆಯಲ್ಲಿ ಮೃತರಾದರು. ಮೂಲತಃ ಬೆಳ್ಳಿಪ್ಪಾಡಿಯವರಾದ ಸಂಕಪ್ಪ ರೈಯವರ ಮೃತದೇಹವನ್ನು ಬುಧವಾರ ಅಪರಾಹ್ನ ಅವರ ಪುತ್ತೂರಿನ ಕೊಂಬೆಟ್ಟು ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಿ ಬಳಿಕ ಮಾಣಿ ನೇಲ್ತೊಟ್ಟು ಮನೆಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿದುಬಂದಿದೆ.

Also Read  ವಲಸೆ ಕುರಿಗಾರರಿಂದ ಅರ್ಜಿ ಆಹ್ವಾನ

error: Content is protected !!
Scroll to Top