ಮಹಿಳಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಲವು ಉದ್ಯೋಗಗಳು – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಮಹಿಳಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸರ್ಕಾರಿ ಹಾಗೂ ಮ್ಯಾನೇಜ್‍ ಮೆಂಟ್ ಕೋಟಾದ ಕೋರ್ಸ್‍ಗಳು ಖಾಲಿಯಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಕಂಪ್ಯೂಟರ್ ಆಪರೇಟರ್ ಮತ್ತು ಪ್ರೊಗ್ರಾಮಿಂಗ್ ಅಸಿಸ್ಟೆಂಟ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಎಲೆಕ್ಟ್ರೀಷಿಯನ್, ಅಡ್ವಾನ್ಸ್‍ಡ್ ಸಿ.ಎನ್.ಸಿ ಮ್ಯಾಚಿಂಗ್ ಕೋರ್ಸ್ ಸೇರಲು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹರು ಕದ್ರಿಯಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ನ ಪ್ರಾಂಶುಪಾಲರನ್ನು ಸಂಪರ್ಕಿಸಿ, ನೇರವಾಗಿ ಅರ್ಜಿ ಸಲ್ಲಿಸಿ ಅದೇ ದಿನದಂದು ಪ್ರವೇಶ ಪಡೆಯಬಹುದು. ಅರ್ಜಿ ಪಡೆಯಲು ಹಾಗೂ ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಇದೇ ಸೆ.23ರಂದು ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:0824-2216360 ಅಥವಾ 9880119147, 9448858417ಗೆ ಕರೆ ಮಾಡುವಂತೆ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಪುತ್ತೂರು ಕಟ್ಟಡ ದುರಂತದಲ್ಲಿ ಮೃತದೇಹದ ಮುಂದೆ ತೆಗೆದ ಸೆಲ್ಫಿ ಇದೀಗ ವೈರಲ್ ► ಯುವಕನ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ

error: Content is protected !!
Scroll to Top