ಸುಳ್ಯ ವಿಧಾನಸಭಾ ಕ್ಷೇತ್ರ ; ಅಕ್ರಮ- ಸಕ್ರಮ ಸಮಿತಿಗೆ ಬಿಜೆಪಿ ಸದಸ್ಯರ ನೇಮಕ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 13. ಸುಳ್ಯ ವಿಧಾನಸಭಾ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿ ಇರುವಾಗ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ- ಸಕ್ರಮ ಸಮಿತಿ ಸದಸ್ಯರು ಬಿಜೆಪಿಗರಾಗಿರುವುದು ವಿಶೇಷ.


ಸರಕಾರದಿಂದ ಹೊರಡಿಸಲಾದ ಅಧಿಸೂಚನೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ ಅಧ್ಯಕ್ಷರಾಗಿ, ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಅರಂತೋಡಿನ ಬಿಜೆಪಿ ನಾಯಕಿ ಶ್ರೀಮತಿ ಭಾರತಿ ಪುರುಷೋತ್ತಮ ಹಾಗೂ ನ್ಯಾಯವಾದಿ ಜಗದೀಶ್ ಡಿ.ಪಿ.ಯವರನ್ನು ಸದಸ್ಯರಾಗಿ ನೇಮಿಸಲಾಗಿದೆ. ಆದೇಶ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಕಾಂಗ್ರೆಸ್, ವಲಯ ಉಸ್ತುವಾರಿ ಸಚಿವರನ್ನು ಸಂಪರ್ಕಿಸಿ ವಿಷಯ ತಿಳಿಸಿದ್ದು, ಈ ಆದೇಶಕ್ಕೆ ತಡೆ ನೀಡಿ ಹೊಸ ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ನೇಮಿಸಿ ಆದೇಶ ಹೊರಡಿಸುವಂತೆ ಸಚಿವರು ಸೂಚಿಸಿದ್ದಾರೆಂದು ತಿಳಿದುಬಂದಿದೆ. ನಾಳೆಯೊಳಗೆ ಹೊಸ ಆದೇಶ ಬರುವ ನಿರೀಕ್ಷೆಯಿದೆ.

Also Read  ಸುಳ್ಯ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

 

error: Content is protected !!
Scroll to Top