(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14. ತೆರಿಗೆ ವಂಚನೆ, ಸೋರಿಕೆ ಹಾಗೂ ತೆರಿಗೆ ಕಳ್ಳತನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಸೇರಿ ಹಲವು ಇಲಾಖೆಗಳ ಜತೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ತೆರಿಗೆ ಸಂಗ್ರಹದ ಪ್ರಗತಿ ಹೆಚ್ಚಿಸಿ ಎಂದು ಹೇಳಿದ್ದಾರೆ.









