(ನ್ಯೂಸ್ ಕಡಬ) newskadaba.com ಮುಜಾಫರ್ಪುರ, ಸೆ. 14. 30 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮಗುಚಿ ಬಿದ್ದ ಘಟನೆ ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಬಾಗ್ಮತಿ ನದಿಯಲ್ಲಿ ಗುರುವಾರದಂದು ಸಂಭವಿಸಿದೆ.
ಸ್ಥಳೀಯರು ಹಾಗೂ ರಕ್ಷಣಾ ತಂಡದಿಂದ ಮಕ್ಕಳ ಶೋಧ ಕಾರ್ಯ ನಡೆಯುತ್ತಿದ್ದು, ಇದುವರೆಗೆ 20 ಮಕ್ಕಳನ್ನು ರಕ್ಷಿಸಲಾಗಿದೆ. ಉಳಿದವರಿಗಾಗಿ ಶೋಧಕಾರ್ಯ ಮುಂದುವರಿದಿದೆ ಎನ್ನಲಾಗಿದೆ.