ದೇವಾಲಯದ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ನಿಷೇಧಕ್ಕೆ ಸರ್ಕಾರ ಚಿಂತನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14. ಮುಜುರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಾಲಯಗಳ ಸುತ್ತಮುತ್ತ ಬೀಡಿ, ಸಿಗರೇಟ್, ಗುಟ್ಕಾ ಹಾಗೂ ಪಾನ್ ಮಸಾಲಗಳಂತಹ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಶೀಘ್ರವೇ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ.

ಈ ಕುರಿತಂತೆ ಕಾಂಗ್ರೆಸ್ ಪಕ್ಷದ ಖಾತೆಯಿಂದ ಟ್ವೀಟ್ ಮಾಡಲಾಗಿದ್ದು, ಆಧ್ಯಾತ್ಮಿಕ ಅನುಭೂತಿಯನ್ನು ನೀಡುವ ದೇವಾಲಯಗಳಲ್ಲಿ ಸ್ವಚ್ಛತೆ, ಪ್ರಶಾಂತತೆ ಇರಬೇಕಾದ ಹಿನ್ನೆಲೆ ಮುಜರಾಯಿ ಇಲಾಖೆಯ ದೇವಾಲಯಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ನಮ್ಮ ಸರ್ಕಾರ ಎಂದು ತಿಳಿಸಿರುವುದಾಗಿ ವರದಿಯಾಗಿದೆ.

Also Read  ವಿದ್ಯಾರ್ಥಿಗಳಿಗೆ ಸಿಗಲಿದೆ 15,000 ರೂ. ಗಳ ವಿದ್ಯಾಸಿರಿ ಸ್ಕಾಲರ್ಶಿಪ್...! ಇಂದೇ ಅರ್ಜಿ ಸಲ್ಲಿಸಿ

error: Content is protected !!
Scroll to Top