ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿಶ್ವ ಹಿಂದಿ ದಿವಸ್ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 14. ಇಲ್ಲಿನ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಮತ್ತು ಸರಸ್ವತೀ ಆಂಗ್ಲಮಾಧ್ಯಮ ಶಾಲೆಯಲ್ಲಿ ಜಂಟಿಯಾಗಿ ವಿಶ್ವ ಹಿಂದಿ ದಿವಸ್ ಅನ್ನು ಗುರುವಾರದಂದು ಆಚರಿಸಲಾಯಿತು.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ರವಿರಾಜ್ ಶೆಟ್ಟಿ ಕಡಬ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಹಿಂದಿ ದಿವಸ್ ಅಂಗವಾಗಿ ಹಿಂದಿ ಶಿಕ್ಷಕಿ ಶ್ರೀಮತಿ ಜಲಜಾಕ್ಷಿ ಬಿ ವಿ ಇವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಂದ ಭಾಷಣ, ಹಿಂದಿ ಗೀತೆಗಳು ಹಾಗೂ ನೃತ್ಯಗಳು ಮೂಡಿಬಂತು. ವೇದಿಕೆಯಲ್ಲಿ ಪ್ರೌಢವಿಭಾಗದ ಮುಖ್ಯಗುರುಗಳಾದ ಶ್ರೀಮತಿ ಶೈಲಶ್ರೀ ರೈ ಎಸ್, ಆಂಗ್ಲಮಾಧ್ಯಮ ವಿಭಾಗದ ಮುಖ್ಯಸ್ಥೆ ಶ್ರೀಮತಿ ಭವ್ಯಶ್ರೀ ಕೆ ಹಾಗೂ ಪ್ರೌಢವಿಭಾಗದ ಹಿಂದಿ ಶಿಕ್ಷಕಿ ಶ್ರೀಮತಿ ಜಲಜಾಕ್ಷಿ ಬಿ ವಿ ಉಪಸ್ಥಿತರಿದ್ದರು. ಹತ್ತನೇ ತರಗತಿಯ ವಿದ್ಯಾರ್ಥಿನಿಗಳಾದ ಪೂರ್ವಿ ರೈ ಸ್ವಾಗತಿಸಿ, ಧೃತಿ ಪಿ ಸಿ ವಂದಿಸಿದರು. ಮಧುರಾ ರೈ ಬಿ ಹಾಗೂ ರಕ್ಷಾ ಕೆ ಬಿ ಕಾರ್ಯಕ್ರಮ ನಿರೂಪಿಸಿದರು.

Also Read  ಅನ್ಯಕೋಮಿನ ಯುವಕನೊಂದಿಗೆ ಬೈಕ್ ನಲ್ಲಿ ತೆರಳಿದ ಯುವತಿ; ತಿಂಗಳ ಬಳಿಕ ವಿಡಿಯೋ ವೈರಲ್- ದೂರು ದಾಖಲು

 

error: Content is protected !!
Scroll to Top