ಎಂಡೋಸಲ್ಫಾನ್ ಸಂತ್ರಸ್ತರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಸೆ.16ರಿಂದ ಹಮ್ಮಿಕೊಳ್ಳಲಾಗಿದೆ. ಸೆ. 16ರಂದು ಪುತ್ತೂರು ತಾಲೂಕಿನ ಪಾಣಾಜೆ, ಸೆ. 20ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಸೆ. 26ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿರುತ್ತದೆ. ಈ ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಜೇಸಿಐ ಕಡಬ ಕದಂಬ ಘಟಕದ ಜೇಸಿ ಸಪ್ತಾಹ 'ಕದಂಬೋತ್ಸವ' ಉದ್ಘಾಟನೆ ➤ ಕುಂತೂರು ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ತರಬೇತಿ ಶಿಬಿರ

error: Content is protected !!
Scroll to Top