ಜನವರಿಯಲ್ಲಿ ‘ಯುವನಿಧಿ’ ಯೋಜನೆ ಜಾರಿ- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 15. ಮುಂದಿನ ವರ್ಷ ಜನವರಿಯಲ್ಲಿ 5ನೇ ಗ್ಯಾರಂಟಿಯಾದ ಯುವನಿಧಿ ಯೋಜನೆಯನ್ನು ಜಾರಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ನಾನು ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇನೆ. ಈ ಬಾರಿಯೂ 5 ಗ್ಯಾರಂಟಿಗಳಲ್ಲಿ 4 ಗ್ಯಾರಂಟಿ ಜಾರಿ ಮಾಡಿದ್ದೇವೆ. ಯುವನಿಧಿ ಗ್ಯಾರೆಂಟಿ ಜನವರಿಗೆ ಜಾರಿಗೆ ಬರುತ್ತದೆ ಎಂದರು. ನುಡಿದಂತೆ ನಡೆದ ನಾವು ಜುಲೈ 1ರಂದು ಗೃಹಜ್ಯೋತಿ ಯೋಜನೆ ಜಾರಿ ಮಾಡಿ, ಈ ಯೋಜನೆಯಡಿ 200 ಯೂನಿಟ್​ವರೆಗೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಆ. 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿ ಮಾಡಿದ್ದೇವೆ. ದೇಶದಲ್ಲಿ ಇಷ್ಟು ದೊಡ್ಡ ಯೋಜನೆ ಯಾವ ರಾಜ್ಯವೂ ಜಾರಿ ಮಾಡಿಲ್ಲ ಎಂದು ಹೇಳಿದರು.

Also Read  ತೋಟಕ್ಕೆ ನುಗ್ಗಿದ ಕಾಡಾನೆ- ಸುಳ್ಯದಲ್ಲಿ ಕೃಷಿ ಹಾನಿ

error: Content is protected !!
Scroll to Top