ಅಲೋಕ್ ಕುಮಾರ್ ವಿರುದ್ದದ ಲಂಚ ಆರೋಪದ ಕೇಸ್ ರದ್ದು ಮಾಡಿದ ಹೈಕೋರ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 15. ಅಲೋಕ್‌ ಕುಮಾರ್ ವಿರುದ್ಧದ ಲಂಚ ಆರೋಪದ ಕೇಸ್ ಅನ್ನು ಬೆಂಗಳೂರಿನ ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ.


ಬಾರ್‌ನ ಮಾಲೀಕರು ಮತ್ತು ಗ್ರಾಹಕರ ನಡುವೆ ನಡೆದಿದ್ದ ಗಲಾಟೆ ಪ್ರಕರಣವನ್ನು ಮುಕ್ತಾಯಗೊಳಿಸಲು ಅಲೋಕ್ ಕುಮಾರ್ ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಆರೋಪಿಸಲಾಗಿತ್ತು. ತಮ್ಮ ವಿರುದ್ಧದ ಪ್ರಕರಣ ಮತ್ತು ಈ ಸಂಬಂಧ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದು ಕೋರಿ ಅಲೋಕ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

Scroll to Top