ನ್ಯಾಯಿಕ ದಂಡಾಧಿಕಾರಿ ಹಾಗೂ ಪೊಲೀಸ್ ಪಾತ್ರದ ಕುರಿತು ಕಾರ್ಯಗಾರ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ. 16. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಮತ್ತು ಖಾಸಗಿ ವೈದ್ಯಕೀಯ ಸಂಸ್ಥೆಗಳ ಸಹಯೋಗದಲ್ಲಿ ಮಾನಸಿಕ ಆರೋಗ್ಯ ಕಾಳಜಿ ಕಾಯ್ದೆ- 2017ರ ಅಡಿಯಲ್ಲಿ ಮಾನಸಿಕ ಆರೋಗ್ಯ ಪುನರ್ ವಿಮರ್ಶಾ ಮಂಡಳಿ ಮತ್ತು ನ್ಯಾಯಿಕ ದಂಡಾಧಿಕಾರಿ ಹಾಗೂ ಪೊಲೀಸ್ ಪಾತ್ರದ ಕುರಿತು ಕಾರ್ಯಗಾರ ಶನಿವಾರ ಬೆಳಿಗ್ಗೆ 9.30ಕ್ಕೆ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರವೀಂದ್ರ ಎಂ. ಜೋಶಿ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ನಗರ ಉಪಪೊಲೀಸ್ ಆಯುಕ್ತರಾದ ಸಿದ್ದಾರ್ಥ್ ಗೋಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಶ್ಯಂತ್, ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಅನುಷ್ಠಾನಾಧಿಕಾರಿ ಡಾ. ಸುದರ್ಶನ್ ಸಿ.ಎಂ., ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ಅಧೀಕ್ಷಕರಾದ ಡಾ. ಸದಾಶಿವ ಶಾನುಭೋಗ್ ಭಾಗವಹಿಸುವರು. ಸಂಪನ್ಮೂಲ ವ್ಯಕ್ತಿಗಳಾಗಿ ಮಾನಸಿಕ ಆರೋಗ್ಯ ಪುನರ್ ವಿಮರ್ಶಾ ಮಂಡಳಿ ಬೆಂಗಳೂರು ಮತ್ತು ಮೈಸೂರು ವಿಭಾಗ ಹಾಗೂ ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನಿಯಾಜ ಅಹ್ಮದ್ ಎಸ್. ದಫೆದಾರ, ಹಿರಿಯ ನ್ಯಾಯಾಧೀಶರಾದ ಶೋಭಾ ಬಿ.ಜಿ ಭಾಗವಹಿಸುವರು.

Also Read  ಉಪ್ಪಿನಂಗಡಿ : ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಮಾಜಿ ಗ್ರಾ.ಪಂ.ಸದಸ್ಯ

error: Content is protected !!
Scroll to Top