ಪ.ಜಾ, ಪ.ಪಂ. ವಿದ್ಯಾರ್ಥಿಗಳಿಂದ ವಸತಿನಿಲಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ. 16. ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ನ ವಿದ್ಯಾರ್ಥಿಗಳಿಗೆ) ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅಕ್ಟೋಬರ್ 11ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ವೆಬ್‍ಸೈಟ್ ವಿಳಾಸ: https://shp.karnataka.gov.inಅರ್ಜಿ ಸಲ್ಲಿಸಬಹುದು. ತಾಲೂಕುವಾರು ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆ ವೆಬ್‍ಸೈಟ್ https://bcwd.karnataka.gov.in/ನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ವೆಬ್‍ಸೈಟ್ ವಿಳಾಸ: bcwd.hostels@karnataka.gov.inಗೆ ಇ-ಮೇಲ್ ಮೂಲಕ ಜಿಲ್ಲಾ ಅಥವಾ ತಾಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅವರನ್ನು ಸೂಕ್ತ ದಾಖಲೆಗಳೊಂದಿಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ: 8050770005 ಅನ್ನು ಸಂಪರ್ಕಿಸುವಂತೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಮಂಗಳೂರು: ಮಾರ್ಚ್‌ ಮಧ್ಯದಿಂದ ಬೇಸಗೆ ಮಳೆ ಸಂಭವ

error: Content is protected !!
Scroll to Top