ಬಸ್ ನಿಲ್ದಾಣದಲ್ಲಿ ಚಿನ್ನ ಎಗರಿಸುತ್ತಿದ್ದ ಮಹಿಳೆಯ ಬಂಧನ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 16. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದು, ಅವುಗಳಲ್ಲಿ ಮೊದಲ ಯೋಜನೆಯಾದ ‘ಶಕ್ತಿ ಯೋಜನೆ’ ಅಡಿಯಲ್ಲಿ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಆದರೆ, ಈ ಯೋಜನೆಯನ್ನು ದುರುಪಯೋಗ ಮಾಡಿಕೊಂಡಿದ್ದ ತಮಿಳುನಾಡಿದ ಮಹಿಳೆಯೋರ್ವರನ್ನು ಕೊಳ್ಳೇಗಾಲ ಬಸ್‌ ನಿಲ್ದಾಣದಲ್ಲಿ ವಶಕ್ಕೆ ಪಡೆದ ಕುರಿತು ವರದಿಯಾಗಿದೆ.

ಬಂಧಿತ ಮಹಿಳೆಯನ್ನು ಸೆಲ್ವಿ ಎಂದು ಗುರುತಿಸಲಾಗಿದೆ. ಈಕೆ ಉಚಿತ ಪ್ರಯಾಣಕ್ಕೆ ಗುಂಪು ಗುಂಪಾಗಿ ಬರುತ್ತಿದ್ದ ಮಹಿಳೆಯರನ್ನೇ ಟಾರ್ಗೆಟ್‌ ಮಾಡಿ ವಂಚನೆ ಮಾಡುತ್ತಿದ್ದಳು ಎನ್ನಲಾಗಿದೆ. ತಮಿಳುನಾಡು ಮೂಲದವಳಾದ ಈಕೆ ಕೊಳ್ಳೇಗಾಲ ಬಸ್ ನಿಲ್ದಾಣದಲ್ಲಿ ಮಹಿಳೆಯರನ್ನು ಪರಿಚಯಿಸಿಕೊಂಡು ಅವರ ಕತ್ತಿನಲ್ಲಿರುವ ಚಿನ್ನವನ್ನು ಎಗರಿಸುತ್ತಿದ್ದಳು. ಈಕೆಯನ್ನು ಬಂಧಿಸಲಾಗಿದ್ದು, ಪೊಲೀಸರು ಆಕೆಯಿಂದ 57 ಗ್ರಾಂ ಚಿನ್ನ ಜಪ್ತಿ ಮಾಡಿಕೊಂಡಿದ್ದಾರೆ ಎಂದೂ ವರದಿಯಾಗಿದೆ.

Also Read  ಕಡಬದ ಲಾಡ್ಜ್ ನಲ್ಲಿ ಅಪ್ರಾಪ್ತ ಯುವತಿಯ ಅತ್ಯಾಚಾರ ಪ್ರಕರಣ ➤ ಆರೋಪಿಯ ಬಂಧನ

error: Content is protected !!
Scroll to Top