ಗಣೇಶ ಚತುರ್ಥಿ- ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೆ. 19ರಂದು ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 16. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಚೌತಿ ಹಬ್ಬಕ್ಕೆ ಸೆ.18ರ ಬದಲು ಸೆ.19 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಸೆ.19ರಂದು ಚೌತಿ ಹಬ್ಬ ಆಚರಿಸುವುದರಿಂದ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಮನವಿಯ ಮೇರೆಗೆ ಸೆ.19ರಂದು ರಜೆ ಘೋಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ. ಜಿಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ದ.ಕ. ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದರು.

ಇದೀಗ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗೆ ಅನ್ವಯಿಸುವಂತೆ ಗಣೇಶ ಚತುರ್ಥಿ ಹಬ್ಬದ ರಜೆಯನ್ನು ಸ್ಥಳೀಯ ಪರಿಸ್ಥಿತಿಗಳಿಗೆ ಅನುಸಾರವಾಗಿ ಸೆ.18ರ ಬದಲಿಗೆ ಸೆ.19ರಂದು ಸಾರ್ವತ್ರಿಕ ರಜೆ ಘೋಷಿಸಲು ಜಿಲ್ಲಾಧಿಕಾರಿಗಳಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಪಿ. ನಾಗಪ್ರಶಾಂತ್ ನಿರ್ದೇಶಿಸಿದ್ದಾರೆ.

Also Read  ವಿಶೇಷ ಆರೋಗ್ಯ ತಪಾಸಣಾ ಶಿಬಿರ

error: Content is protected !!
Scroll to Top