ಹೆದ್ದಾರಿ ಮಧ್ಯೆ ಉರುಳಿಬಿದ್ದ ಫ್ಲೈವುಡ್ ಸಾಗಾಟದ ಲಾರಿ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 17. ಪ್ಲೈವುಡ್ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಉರುಳಿಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಹೊರಟ್ಟಿಯ ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಇಂದು ಮುಂಜಾನೆ ನಡೆದಿರುವ ಕುರಿತು ವರದಿಯಾಗಿದೆ.

 

ಘಟನೆಯಲ್ಲಿ ಲಾರಿ ಚಾಲಕ ಮತ್ತು ಕ್ಲೀನರ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಿಗೆರೆಯಿಂದ ಪ್ಲೈವುಡ್ ಹೇರಿಕೊಂಡು ಮಹಾರಾಷ್ಟ್ರದ ಕಡೆಗೆ ಹೊರಟಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಮಧ್ಯದಲ್ಲೇ ಉರುಳಿಬಿದ್ದಿದೆ. ಘಟನಾ ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top