ಸೆ. 25ರವರೆಗೆ ಮಲ್ಪೆ ಬೀಚ್ ಪ್ರವೇಶಕ್ಕೆ ನಿರ್ಬಂಧ..!

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 17. ಸಮುದ್ರ ಪ್ರಕ್ಷುಬ್ಧಗೊಂಡಿರುವ ಹಿನ್ನೆಲೆ ಮಲ್ಪೆ ಬೀಚ್ ಪ್ರವೇಶಕ್ಕೆ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಮೇ 16ರಿಂದ ಸೆ.15ರವರೆಗೆ ವಿಧಿಸಲಾಗಿದ್ದ ನಿಷೇಧವನ್ನು ಜಿಲ್ಲಾಧಿಕಾರಿ ಸೂಚನೆಯಂತೆ ಸೆ. 25ರವರೆಗೆ ಮುಂದುವರಿಸಲಾಗಿದೆ ಎಂದು ಮಲ್ಪೆ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಹಾಗೂ ಉಡುಪಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿ ವರ್ಷ ಹಾರ್ಬರ್ ಕ್ರಾಷ್ಟ್ ನಿಯಮದಂತೆ ಬೀಚ್ ಪ್ರದೇಶದಲ್ಲಿ ಮಳೆಗಾಲದುದ್ದಕ್ಕೂ ಎಲ್ಲಾ ರೀತಿಯ ಜಲ ಸಾಹಸ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗುತ್ತಿದ್ದು, ಇತ್ತೀಚಿನ ಮಳೆಯಿಂದಾಗಿ ಅರಬಿಸಮುದ್ರ ಈಗಲೂ ಪ್ರಕ್ಷುಬ್ಧಗೊಂಡಿರುವುದರಿಂದ ಪ್ರವಾಸಿಗರು ಹಾಗೂ ಸಾರ್ವಜನಿಕರು ಸೆ. 25ರ ತನಕ ಸಮುದ್ರಕ್ಕೆ ಇಳಿಯಲು ಅವಕಾಶ ನೀಡದಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಕಡಬದಲ್ಲಿ ಪೇಟೆಯಲ್ಲಿ ಲೋಕಾಯ್ತುಕ ರೈಡ್ ➤ ಮಾಸ್ಕ್ ಹಾಕದವರಿಗೆ ಭರ್ಜರಿ ಕ್ಲಾಸ್

error: Content is protected !!
Scroll to Top