ಜನ ಜಾಗೃತಿ ಮೂಡಿಸಲು ಬೀದಿ ನಾಟಕ- ಆಸಕ್ತ ಕಲಾ ತಂಡಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮಗಳ ಯೋಜನೆ ಮತ್ತು ಸೇವೆಗಳ ಕುರಿತು ಜನ ಜಾಗೃತಿ ಮೂಡಿಸಲು ಬೆಂಗಳೂರು ನಗರ ಜಿಲ್ಲೆಯಲ್ಲಿನ ಜಾನಪದ ಬೀದಿ ನಾಟಕ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

 

ಪ್ರತೀ ತಂಡದಲ್ಲಿ 8 ಜನ (ಸ್ಥಳೀಯ ಕಲಾವಿದರು) ಸದಸ್ಯರು ಇರಬೇಕು. ಇವರಲ್ಲಿ ಇಬ್ಬರು ಮಹಿಳೆಯರು ಕಲಾವಿದರಿರಬೇಕು. ಬೀದಿ ನಾಟಕದಲ್ಲಿ ಭಾಗವಹಿಸುವವರಿಗೆ ಪ್ರದರ್ಶನದ ಅನುಭವವಿರಬೇಕು. ಆಸಕ್ತರು ಕಲಾತಂಡಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಐ.ಇ.ಸಿ ವಿಭಾಗ, ಬೆಂಗಳೂರು ನಗರ ಇಲ್ಲಿ ಅರ್ಜಿಯನ್ನು ಪಡೆದುಕೊಂಡು ಸೆ. 20ರಂದು ಮಧ್ಯಾಹ್ನ 3.00 ಗಂಟೆಯೊಳಗೆ ಸಲ್ಲಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಜ.8 ರಿಂದ 29 ರವರೆಗೆ ಜಿಲ್ಲೆಯ ವಿವಿಧೆಡೆ ಉದರ ದರ್ಶಕ ಶಸ್ತ್ರಚಿಕಿತ್ಸಾ ಶಿಬಿರ ➤ ಕಡಬದಲ್ಲಿ ಯಾವಾಗ ಗೊತ್ತೇ..?

error: Content is protected !!
Scroll to Top