ರಸ್ತೆ ದಾಟಲು ನಿಂತಿದ್ದ ಬೈಕ್ ಗೆ ಬಸ್ ಢಿಕ್ಕಿ – ಯುವಕರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಸುರತ್ಕಲ್‌, ಸೆ. 18. ಡಿವೈಡರ್ ಬಳಿ ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ಇಲ್ಲಿನ ಹೊಸಬೆಟ್ಟು ಎಂಬಲ್ಲಿ ನಡೆದಿದೆ.

ಗಾಯಗೊಂಡವರನ್ನು ಹಳೆಯಂಗಡಿ ನಿವಾಸಿ ಮೊಹಮ್ಮದ್ ಶಾಹೀಲ್(20) ಮತ್ತು ಪಕ್ಷಿಕೆರೆಯ ಅರಾಫತ್(19) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಬಸ್, ಡಿವೈಡರ್ ಬಳಿ ರಸ್ತೆ ದಾಟಲು ಕಾಯುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆನ್ನಲಾಗಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಗೆ ಸಂಬಂಧಿಸಿ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 279, 337, 338 ಮತ್ತು 184 ಎಂವಿ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top