ಕಡಬ: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಡಬ, ಸೆ. 18. ಪ್ರಕರಣವೊಂದರಲ್ಲಿ ಅರೋಪಿತನಾಗಿ ಕಳೆದ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಕಡಬ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ವರದಿಯಾಗಿದೆ.

ಬಂಧಿತನನ್ನು ಮೂಲತಃ ಬೆಳ್ಳಾರೆ ಸಮೀಪದ ಬಾಳಿಲ ಗ್ರಾಮದ ಮುಪ್ಪೇರಿಯ ನಿವಾಸಿ ಜಗನ್ನಾಥ್ ಎಂದು ಗುರುತಿಸಲಾಗಿದೆ. ಈತ ಕಡಬ ತಾಲೂಕಿನ ಹೊಸ್ಮಠ ಎಂಬಲ್ಲಿ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದ ಬಳಿಕ ತಲೆಮರೆಸಿಕೊಂಡಿದ್ದನು. ಇದೀಗ ಆರೋಪಿ ಜಗನ್ನಾಥನನ್ನು ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಬಾಳಲೆ ಎಂಬಲ್ಲಿ ವಶಕ್ಕೆ ಪಡೆಯಲಾಗಿದೆ.

ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿ.ಎಸ್, ಕಡಬ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ಎಸೈ ಅಭಿನಂದನ ಹಾಗೂ ತನಿಖಾ ಎಸೈ ಅಕ್ಷಯ್ ಮಾರ್ಗದರ್ಶನದಲ್ಲಿ ಕಡಬ ಠಾಣಾ ಸಿಬ್ಬಂದಿಗಳಾದ ರಾಜು ನಾಯಕ್, ಸಿದ್ದಪ್ಪ ಹೂಗಾರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

Also Read  ಟಿಪ್ಪು ಜಯಂತಿ ಆಚರಣೆಯ ಹಿನ್ನೆಲೆ ► ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆಯವರೆಗೆ 144 ನಿಷೇಧಾಜ್ಞೆ ಜಾರಿ

error: Content is protected !!
Scroll to Top