ಏನೇ ಆದರೂ RSS ಕಛೇರಿ ತೆರೆಯಲು ಬಿಡುವುದಿಲ್ಲ- ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 18. ಕಳೆದ ಒಂಬತ್ತು ವರ್ಷಗಳಿಂದ ರಾಜ್ಯದ ನಾನಾ ಶಿಕ್ಷಣ ಸಂಸ್ಥೆಗಳು ಹಾಗೂ ಪೊಲೀಸ್‌ ಠಾಣೆಗಳಲ್ಲಿ ಆರ್‌ಎಸ್‌ಎಸ್‌ ಶಾಖೆಗಳು ನಡೆಯುತ್ತಿವೆ. ಇನ್ನು ಮುಂದೆ ಅವುಗಳನ್ನು ಬಂದ್‌ ಮಾಡಿಸಲಾಗುವುದು ಎಂದು ಆರ್‌ಡಿಪಿಆರ್‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಖಡಕ್‌ ಎಚ್ಚರಿಕೆ ನೀಡಿದರು.


ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ಶಿಕ್ಷಣ ಸಂಸ್ಥೆಗಳು ಹಾಗೂ ಪೊಲೀಸ್‌ ಠಾಣೆಯಲ್ಲಿ ಕೇಸರಿ ಶಾಲು ಹಾಕಿಕೊಂಡಿದ್ದು ಕಂಡು ಬಂದಿದೆ. ಇನ್ನು ಮುಂದೆ ಅವೆಲ್ಲವೂ ಬಂದ್‌ ಆಗಲಿವೆ. ನಮ್ಮ ಪ್ರದೇಶದ ಮಕ್ಕಳಿಗೆ ಅನುಕೂಲವಾಗಲಿ ಎಂದು ಕೇಂದ್ರೀಯ ವಿಶ್ವವಿದ್ಯಾಲಯ (ಸಿಯುಕೆ) ತರಲಾಗಿದೆ. ಅಲ್ಲಿ ಶಿಕ್ಷಣ ಹೊರತುಪಡಿಸಿ ಬೇರೆಲ್ಲ ನಡೆದಿದೆ. ಕಳೆದ ವರ್ಷ ಆರ್‌ಎಸ್‌ಎಸ್‌ ಮಾರ್ಚ್ ಮಾಡಲಾಗಿದೆ. ಏನೇ ಆದರೂ ಅಲ್ಲಿ ಆರ್‌ಎಸ್‌ಎಸ್‌ ಕಚೇರಿ ತೆರೆಯಲು ಬಿಡುವುದಿಲ್ಲ ಎಂದು ಗುಡುಗಿದರು.

Also Read  ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್‌ ಶಾಕ್ ಕೊಟ್ಟ 'ಸಿಎಂ ಬೊಮ್ಮಾಯಿ' ➤ ಯಾವುದೇ ಪ್ರಸ್ತಾವನೆ ಸಲ್ಲಿಸದಂತೆ ಆದೇಶ !

error: Content is protected !!
Scroll to Top