ಸುಳ್ಯ: ಬೈಕ್ ಕಳ್ಳತನ- ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 18. ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ.

ಬಂಧಿತ ಆರೋಪಿಯನ್ನು ಕೊಡಗು ಸೋಮವಾರಪೇಟೆಯ ಬಸವನಹಳ್ಳಿಯ ಸುಬ್ರಮಣಿ (26) ಎಂದು ಗುರುತಿಸಲಾಗಿದೆ. ಸೆ. 16ರಂದು ದಾಖಲಾಗಿದ್ದ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆ ನಡೆಸಿದ ಸುಳ್ಯ ಪೊಲೀಸರ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ನಡೆದ ಕೆಲವೇ ಗಂಟೆಗಳಲ್ಲಿ ಸುಳ್ಯ ತಾಲೂಕು ಆಲಟ್ಟಿ ಗ್ರಾಮದ ಸರಳಿಕುಂಜ ಎಂಬಲ್ಲಿ ಆರೋಪಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಇದಲ್ಲದೇ ಆರೋಪಿ ಸುಬ್ರಮಣಿ ಕೆಲ ದಿನಗಳ ಹಿಂದೆ ಸುಳ್ಯ ಬಸ್ ನಿಲ್ದಾಣದಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬರ ಪರ್ಸ್ ತೆಗೆದುಕೊಂಡು ಹೋಗಿದ್ದು ತನಿಖೆ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Also Read  ಚಿತ್ರರಂಗಕ್ಕೆ ಮತ್ತೊಂದು ಶಾಕ್ ➤ ಯುವ ನಟ ಆತ್ಮಹತ್ಯೆಗೆ ಶರಣು

error: Content is protected !!
Scroll to Top