ವಿದೇಶದಿಂದ ಅಕ್ರಮವಾಗಿ ಇ-ಸಿಗರೇಟ್ ಸಾಗಾಟ – ಇಬ್ಬರನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ದೇವನಹಳ್ಳಿ, ಸೆ. 18. ವಿದೇಶದಿಂದ ಅಕ್ರಮವಾಗಿ ಇ-ಸಿಗರೇಟ್​ ಸಾಗಣೆ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್​ ಅಧಿಕಾರಿಗಳು, ಪ್ರಯಾಣಿಕರಿಂದ ಇ-ಸಿಗರೇಟ್​ಗಳನ್ನು ವಶಪಡಿಸಿಕೊಂಡಿದ್ದಾರೆ.


ಕಾರ್ಯಾಚರಣೆ ನಡೆಸಿದ ಏರ್​ಪೋರ್ಟ್​ನ ಕಸ್ಟಮ್ಸ್ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಮಲೇಶಿಯಾದ ಕೌಲಾಂಪುರದಿಂದ ಎಂಎಚ್ 192ನ ಮಲೇಶಿಯಾ ಏರ್​ಲೈನ್ಸ್​ನಲ್ಲಿ ಆಗಮಿಸಿದ್ದ ಇಬ್ಬರು ಪ್ರಯಾಣಿಕರಿಂದ ಬರೋಬ್ಬರಿ 15.9 ಲಕ್ಷ ರೂ. ಮೌಲ್ಯದ 1,590 ಸಿಗರೇಟ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸದ್ಯ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿರುವ ಅಧಿಕಾರಿಗಳು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ.

Also Read  ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

error: Content is protected !!
Scroll to Top