(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 18. ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಔಷಧಿಗೆಂದು ಆಸ್ಪತ್ರೆಗೆ ಬಂದಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಬಿಜೆಪಿ ಸಕ್ರಿಯ ಯುವ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು (43) ಎಮದು ಗುರುತಿಸಲಾಗಿದೆ. ಅಮ್ಟಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿದ್ದ ಪ್ರಕಾಶ್, ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಔಷಧಿಗೆಂದು ಬೆಳಿಗ್ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬಂದಿದ್ದು, ಈ ವೇಳೆ ಆಸ್ಪತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
Also Read ತಿತ್ಲಿ ಚಂಡಮಾರುತಕ್ಕೆ ಉಳ್ಳಾಲ, ಉಚ್ಚಿಲದಲ್ಲಿ ಪ್ರಕ್ಷುಬ್ಧಗೊಂಡ ಕಡಲು ► ಪಣಂಬೂರಿನಲ್ಲಿ ಹೈ ಅಲರ್ಟ್ ಘೋಷಣೆ