ಸೆ. 20ರಂದು ಸಮಾಜ ಕಲ್ಯಾಣ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಎಚ್.ಸಿ ಮಹದೇವಪ್ಪ ಅವರು ಸೆ. 20ರ ಬುಧವಾರದಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.


ವಿವರ ಇಂತಿದೆ:
ಸೆ.20ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಗರದ ಪಿವಿಎಸ್ ಬಳಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ಉದ್ಘಾಟಿಸುವರು. ಮಧ್ಯಾಹ್ನ 1 ಗಂಟೆಗೆ ಮಂಗಳೂರು ತಾಲೂಕಿನ ಕಮ್ಮಾಜೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಅಲ್ಲಿನ ಕುಂದುಕೊರತೆ ಬಗ್ಗೆ ವಿಚಾರಣೆ ನಡೆಸುವವರು. ರಾತ್ರಿ 9.50ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ► ಸರಸ್ವತಿ ವಿದ್ಯಾಲಯದ ಚಿನ್ಮಯಿ ಬಿ. ರಾಜ್ಯ ಮಟ್ಟಕ್ಕೆ ಆಯ್ಕೆ

error: Content is protected !!
Scroll to Top