ಮಂಗಳೂರು: ಸೆ. 22 ರಂದು ಕಾರ್ಯಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯಸಂಸ್ಥೆ ಹಾಗೂ ಜಿಲ್ಲಾ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಸೆ. 22ರಂದು ಬೆಳಿಗ್ಗೆ ನಗರದ ಲಾಲ್‍ಬಾಗ್ ನಲ್ಲಿರುವ ಜಿಲ್ಲಾ ಸ್ಕೌಟ್ ಗೈಡ್ಸ್ ಭವನದಲ್ಲಿ ಒಂದು ದಿನದ ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ಮತ್ತು ತಾಲೂಕು ದೈಹಿಕ ಶಿಕ್ಷಣಾಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಸ್ಕೌಟ್ಸ್ ಮತ್ತು ಗೈಡ್ಸ್ ನೋಡಲ್ ಅಧಿಕಾರಿಗಳು, ಸಿ.ಆರ್.ಪಿ ಮತ್ತು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮತ್ತು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿಗಳು ಕಾರ್ಯಗಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ 8 ಮಂದಿ ಆರೋಪಿಗಳು ವಶಕ್ಕೆ

error: Content is protected !!
Scroll to Top