ಟಿಕೆಟ್ ವಂಚನೆ ಪ್ರಕರಣ- ಹಾಲಶ್ರೀ ಸ್ವಾಮೀಜಿ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಗೆ ಬಿಜೆಪಿಯಿಂದ ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ಪಡೆದು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಒಡಿಶಾ ರಾಜ್ಯದಲ್ಲಿ ಬಂಧಿಸಿದ್ದಾರೆ.

ಪ್ರಕರಣದ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿ ತಾಲೂಕಿನ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಒಡಿಶಾದ ಕಟಕ್‌ನಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಚಲಿಸುತ್ತಿದ್ದ ರೈಲಿನಲ್ಲೇ ಹಾಲಶ್ರೀಯನ್ನು ಬಂಧಿಸಿರುವ ಪೊಲೀಸರು ಅಲ್ಲಿಂದ ಬೆಂಗಳೂರಿಗೆ ಕರೆ ತರುತ್ತಿದ್ದಾರೆ ಎನ್ನಲಾಗಿದೆ.

Also Read  ಬಾಯಿಯೇ ಆರೋಗ್ಯದ ಹೆಬ್ಬಾಗಿಲು ➤ ಡಾ|| ಚೂಂತಾರು

error: Content is protected !!
Scroll to Top