ಬೆಂಕಿ ಆಕಸ್ಮಿಕ- ಇಲೆಕ್ಟ್ರಾನಿಕ್ ಅಂಗಡಿ ಸುಟ್ಟು ಕರಕಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 20. ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಇಲೆಕ್ಟ್ರಾನಿಕ್ ಅಂಗಡಿಯೊಂದು ಬಾಗಶ: ಬೆಂಕಿಗಾಹುತಿಯಾದ ಘಟನೆ ಬಂಟ್ವಾಳ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ.


ಬಂಟ್ವಾಳ ಪೇಟೆಯ ಬಡ್ಡಕಟ್ಟೆಯಲ್ಲಿರುವ ಪುರಸಭಾ ವಾಣಿಜ್ಯ ಮಳಿಗೆಯೊಂದರಲ್ಲಿ ಈ ಅಗ್ನಿ ಅನಹುತ ಸಂಭವಿಸಿದ್ದು, ಹಲವು ಸೊತ್ತುಗಳು ಸುಟ್ಟುಹೋಗಿವೆ ಎಂದು ಹೇಳಲಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬಂದಿ ಸ್ಥಳೀಯರೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಂಗಡಿಯಲ್ಲಿದ್ದ ಸುಮಾರು ‌ಲಕ್ಷಾಂತರ ರೂ. ಬೆಲೆಬಾಳುವ ಟಿ.ವಿ ಸಹಿತ ಅನೇಕ ಗೃಹೋಪಯೋಗಿ ಉಪಕರಣಗಳು ಸುಟ್ಟು ಹೋಗಿದೆ ಎಂದು ಹೇಳಲಾಗಿದೆ.

Also Read  ಪುಂಜಾಲಕಟ್ಟೆ: ಅಟೋರಿಕ್ಷಾ - ಬೈಕ್ ಢಿಕ್ಕಿ ► ಸವಾರರಿಗೆ ಗಾಯ

error: Content is protected !!
Scroll to Top