ಪತಿಗೆ ಖಾರದ ಪುಡಿ ಮಿಶ್ರಿತ ಬಿಸಿ ನೀರು ಎರಚಿದ ಪತ್ನಿ – ಪ್ರಕರಣ ದಾಖಲು



(ನ್ಯೂಸ್ ಕಡಬ) newskadaba.com ಕಾಪು, ಸೆ. 20. ಪತ್ನಿಯೊಬ್ಬಳು ತನ್ನ ಪತಿಯ ಮೈಮೇಲೆ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರು ಎರಚಿದ್ದು ಪತಿ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ಉಡುಪಿಯ ಕಟಪಾಡಿ ಸಮೀಪ ಸಂಭವಿಸಿದೆ.







ಗಾಯಾಳುವನ್ನು ಮೊಹಮ್ಮದ್ ಅಶ್ರಫ್‌ ಎಂದು ಗುರುತಿಸಲಾಗಿದೆ. ಘಟನೆಯ ಕುರಿತಂತೆ ಪತ್ನಿ , ಅತ್ತೆ, ಮಾವ ಹಾಗೂ ಮತ್ತಿತರರು ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆಯಲ್ಲಿ ಮುಖ, ದೇಹ, ಎಡಗೈ, ಎದೆ, ಬೆನ್ನು ಹಾಗೂ ಬಲಕೈ ಸುಟ್ಟು ಹೋಗಿ ಗಂಭೀರ ಗಾಯಗೊಂಡಿರುವ ಆಸಿಫ್, ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.






ಪತಿ ಆಸಿಫ್ ಬೇರೆ ಹುಡುಗಿಯೊಂದಿಗೆ ಸಂಬಂಧ ಹೊಂದಿರುವುದಾಗಿ ಅನುಮಾನ ಹೊಂದಿದ್ದ ಪತ್ನಿ, ಈ ಬಗ್ಗೆ ಆಗಾಗ್ಗೆ ಜಗಳವಾಡುತ್ತಿದ್ದಳು ಎನ್ನಲಾಗಿದೆ. ಸೆ.17ರಂದು ಸಂಜೆ ಆಸಿಫ್ ಸ್ನಾನ ಮಾಡುತ್ತಿದ್ದ ವೇಳೆ ಹೊರಗಿನಿಂದ ಪತ್ನಿ ಬಾಗಿಲು ಬಡಿದಿದ್ದು, ಆಸಿಫ್ ಬಾಗಿಲು ತೆರೆದಾಗ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರನ್ನು ಮೈ ಮೇಲೆ ಎರಚಿದ್ದಾಗಿ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top