ನಾಳೆ (ಸೆ. 20) ಮೆಟ್ರೋ ರೈಲು ಸಂಚಾರದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಮಾರ್ಗ ಸುರಕ್ಷತಾ ಪರಿಶೀಲನೆ ಹಿನ್ನೆಲೆ ನಾಳೆ (ಸೆ. 21) ಕೆ.ಆರ್ ಪುರದಿಂದ ಗರುಡಾಚಾರ್ ಪಾಳ್ಯ ಹಾಗೂ ಬೈಯಪ್ಪನಹಳ್ಳಿಯಿಂದ ಇಂದಿರಾನಗರ ನಿಲ್ದಾಣದವರೆಗೆ ಮೆಟ್ರೋ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.


ನಾಳೆ ದಿನವಿಡೀ ಕೆ.ಆರ್ ಪುರ ಹಾಗೂ ಗರುಡಾಚಾರ್ ಪಾಳ್ಯ ನಿಲ್ದಾಣದವರೆಗೆ ರೈಲು ಸೇವೆ ಲಭ್ಯವಿರುವುದಿಲ್ಲ. ಬೈಯಪ್ಪನಹಳ್ಳಿಯಿಂದ ಇಂದಿರಾನಗರ ಮೆಟ್ರೋ ನಿಲ್ದಾಣದವರೆಗೆ ಮಧ್ಯಾಹ್ನ 1.30 ರಿಂದ ಸಂಜೆ 4.30 ರವರೆಗೆ ಮೆಟ್ರೋ ರೈಲು ಸೇವೆ ಇರುವುದಿಲ್ಲ. ವೈಟ್ ಫೀಲ್ಡ್ ಗರುಡಾಚಾರ್ ಪಾಳ್ಯದ ನಡುವೆ ಎಂದಿನಂತೆ ಮೆಟ್ರೋ ರೈಲುಗಳು ಸಂಚರಿಸಲಿವೆ. ಇಂದಿರಾನಗರ ಮತ್ತು ಕೆಂಗೇರಿ ನಡುವೆ ಮಧ್ಯಾಹ್ನ 1.30 ರಿಂದ ಸಂಜೆ 4.30 ರವರೆಗೆ ರೈಲು ಸೇವೆ ಇರುತ್ತದೆ.

Also Read  85 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ..! ➤ ಆರೋಪಿ ಅರೆಸ್ಟ್

error: Content is protected !!
Scroll to Top