(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಸೆ. 20. ಹದಿನಾರು 16 ವರ್ಷದ ನೀಟ್ ಆಕಾಂಕ್ಷಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಸ್ತಾನದ ಕೋಟ ಜಿಲ್ಲೆಯ ವಿಜ್ಞಾನ ನಗರ ಪ್ರದೇಶದಿಂದ ವರದಿಯಾಗಿದೆ.
ವಿದ್ಯಾರ್ಥಿನಿಯನ್ನು ಕೂಡಲೇ ಆಕೆಯ ಸಹಪಾಠಿಗಳು ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೇ ಆಕೆ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಉತ್ತರ ಪ್ರದೇಶದ ಮವು ನಿವಾಸಿ 12 ಪ್ರಿಯಾಸ್ ಸಿಂಗ್ ಎಂದು ಗುರುತಿಸಲಾಗಿದೆ. ಈಕೆ ಕೋಟಾದ ಕೋಚಿಂಗ್ ಇನ್ಸ್ಟಿಟ್ಯೂಟ್‍ನಲ್ಲಿ NEET-UG ಗೆ ತಯಾರಿ ನಡೆಸುತ್ತಿದ್ದು, ಇಲ್ಲಿನ ವಿಜ್ಞಾನನಗರ ಪ್ರದೇಶದ ಹಾಸ್ಟೆಲ್‍ನಲ್ಲಿ ವಾಸಿಸುತ್ತಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.
Also Read 70 ವರ್ಷ ಮೇಲ್ಪಟ್ಟ ನಾಗರೀಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ - ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ