ಪ್ರಧಾನಮಂತ್ರಿ ವಿದ್ಯಾರ್ಥಿ ವೇತನ- ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಪ್ರಸ್ತಕ ಸಾಲಿನ ವಿವಿಧ ವೃತ್ತಿಪರ ಪದವಿ ಕೋರ್ಸ್‌ ಗಳಲ್ಲಿ ಪ್ರವೇಶ ಪಡೆದ ಮಾಜಿ ಸೈನಿಕರ ಮಕ್ಕಳಿಂದ ಪ್ರಧಾನ ಮಂತ್ರಿಗಳ ವಿದ್ಯಾರ್ಥಿ ವೇತನ ಯೋಜನೆಯಡಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.


2023-24ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ, ಭಾರತೀಯ ವೈದ್ಯಕೀಯ ಮಂಡಳಿ ಹಾಗೂ ಯುಜಿಸಿಯಂತಹ ಆಯಾ ಸರ್ಕಾರಿ ನಿಯಂತ್ರಣ ಸಂಸ್ಥೆಗಳಲ್ಲಿ ಮೊದಲ ವೃತ್ತಿಪರ ಪದವಿ ಕೋರ್ಸ್ ಗಳಾದ ಬಿಇ, ಬಿಟೆಕ್, ಬಿಡಿಎಸ್, ಎಂಬಿಬಿಎಸ್, ಬಿಇಡಿ, ಬಿಬಿಎ, ಬಿಸಿಎ, ಬಿ ಫಾರ್ಮ ಕೋರ್ಸ್‌ ಗಳಲ್ಲಿ ಮೊದಲನೇ ವರ್ಷದಲ್ಲಿ ಪ್ರವೇಶ ಪಡೆದ ಮಾಜಿ ಸೈನಿಕರ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ.

Also Read  ಸುಳ್ಯ - ಮಡಿಕೇರಿ ರಸ್ತೆಯಲ್ಲಿ ಮತ್ತೆ ವಾಹನ ಸಂಚಾರ ನಿಷೇಧ ► ಮೂರು ದಿನಗಳ ಹಿಂದಷ್ಟೇ ಸಂಚಾರಕ್ಕೆ ಅವಕಾಶ ನೀಡಲಾಗಿದ್ದ ಸಂಪಾಜೆ ಘಾಟ್ ರಸ್ತೆ

ಹೊಸದಾಗಿ ಅರ್ಜಿ ಸಲ್ಲಿಸಲು ಕೆಎಸ್‍ಬಿ ವೆಬ್‍ಸೈಟ್ (www.ksb.gov.in) ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top