ಮಂಗಳೂರು: 16 ಎಎಸ್ಐ ಗಳಿಗೆ ಪಿಎಸ್ಐ ಆಗಿ ಭಡ್ತಿ – ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಹಲವು ವರ್ಷಗಳಿಂದ ಮುಂಭಡ್ತಿಗೆ ಕಾಯುತ್ತಿದ್ದ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ 16 ಪೊಲೀಸ್ ಸಹಾಯಕ ಉಪನಿರೀಕ್ಷಕರಿಗೆ ಪೊಲೀಸ್ ಉಪನಿರೀಕ್ಷಕರಾಗಿ ಮುಂಭಡ್ತಿ ನೀಡಿ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಂಗಳವಾರದಂದು ಆದೇಶ ಹೊರಡಿಸಿದ್ದಾರೆ. ಭಡ್ತಿ ಪಡೆದಿರುವವರನ್ನು ವಿವಿಧ ಪೊಲೀಸ್ ಠಾಣೆಗಳಿಗೆ ನಿಯೋಜಿಸಲಾಗಿದೆ.

ಪಿಎಸ್‌ಐ ಆಗಿ ಭಡ್ತಿಯಾಗಿರುವ ಕಂಕನಾಡಿ ನಗರ ಠಾಣೆಯ ನವೀನ್ ಮೂಡುಬಿದಿರೆಗೆ, ಕಂಕನಾಡಿ ನಗರ ಠಾಣೆಯ ಜನಾರ್ದನ ನಾಯ್ಕ ಸುರತ್ಕಲ್ ಪೊಲೀಸ್ ಠಾಣೆಗೆ, ಸಿಎಸ್ಪಿಯ ಆನಂದ ಬಿ. ಉತ್ತರ ಸಂಚಾರ ಠಾಣೆಗೆ, ಗ್ರಾಮಾಂತರ ಠಾಣೆಯ ವಿನೋದ್ ಕೊಣಾಜೆ ಠಾಣೆಗೆ, ಪಣಂಬೂರು ಠಾಣೆಯ ಈಶ್ವರ ಸ್ವಾಮಿ ಕದ್ರಿ ಸಂಚಾರ ಠಾಣೆಗೆ, ಕದ್ರಿ ಠಾಣೆಯ ಶಾಂತಪ್ಪ ಜಿ. ಕಂಕನಾಡಿ ನಗರ ಠಾಣೆಗೆ, ಸಂಚಾರ ಪಶ್ಚಿಮ ಠಾಣೆಯ ಕೃಷ್ಣಪ್ಪ ಮೂಡುಬಿದಿರೆ ಠಾಣೆಗೆ, ಉತ್ತರ ಠಾಣೆಯ ಶಿವಪ್ಪ ಗೌಡ ಅದೇ ಠಾಣೆಗೆ ನಿಯೋಜನೆಗೊಂಡಿದ್ದಾರೆ.

Also Read  ಕೋಳಿ ಅಂಕಕ್ಕೆ ಪೊಲೀಸರ‌ ದಾಳಿ ➤ 9 ಮಂದಿ ವಶಕ್ಕೆ

ಉರ್ವ ಠಾಣೆಯ ಉಲ್ಲಾಸ್ ಪಾಂಡುರಂಗ ಬರ್ಕೆ ಠಾಣೆಗೆ, ಉತ್ತರ ಠಾಣೆಯ ಓಂ ದಾಸ್ ಸೆನ್ ಠಾಣೆಗೆ, ಐಎಸ್ಡಿಯ ರವಳೇಂದ್ರ ಗ್ರಾಮಾಂತರ ಠಾಣೆಗೆ, ಸಂಚಾರ ಪಶ್ಚಿಮ ಠಾಣೆಯ ಶಶಿಧರ ಶೆಟ್ಟಿ ಸುರತ್ಕಲ್ ಠಾಣೆಗೆ, ಉಳ್ಳಾಲ ಠಾಣೆಯ ಪ್ರಾಣೇಶ್ ಕುಮಾರ್ ಬಿ. ಅದೇ ಠಾಣೆಗೆ, ಸೆನ್ ಠಾಣೆಯ ಮೋಹನ್ ಅದೇ ಠಾಣೆಗೆ, ಸಿಸಿಬಿಯ ಹರೀಶ್ ಪದವಿನಂಗಡಿ ಸಿಎಸ್ಬಿಗೆ, ದಕ್ಷಿಣ ಠಾಣೆಯ ಪುರಂದರ ಬಿ.ಪಿ, ಸಿಸಿ ಆರ್.ಬಿಯ ಪಿಎಸ್‌ಐ ಹುದ್ದೆಗೆ ನೇಮಕ ಮಾಡಿ ವರ್ಗಾಯಿಸಲಾಗಿದೆ.

Also Read  ಎಣಿತಡ್ಕ: ದೈವಗಳ ಪುನಃಪ್ರತಿಷ್ಠಾಮಹೋತ್ಸವ ಹಾಗೂ ನೇಮೋತ್ಸವ

error: Content is protected !!
Scroll to Top