ಇನ್ನುಮುಂದೆ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧ – ಸರಕಾರದಿಂದ ಮಹತ್ವದ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಇನ್ನುಮುಂದೆ ರಾಜ್ಯ ಸರ್ಕಾರದಿಂದ ನಡೆಸಲ್ಪಡುವ ಅಧಿಕೃತ ಸಭೆ, ಸಮಾರಂಭಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ನೀರಿನ ಬಾಟಲ್ ಗಳ ಬಳಕೆ ಹಾಗೂ ಸರಬರಾಜನ್ನು ಸಂಪೂರ್ಣವಾಗಿ ನಿಷೇಧಿಸಿ, ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯಾದ್ಯಂತ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ- ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿಯ ನೀರಿನ ಬಳಕೆ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ ಆದೇಶಲಾಗಿತ್ತು. ಇಂತಹ ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭಾನುಸಾರ ಶುಚಿತ್ವ ರೀತಿಯಲ್ಲಿ ಪ್ಲಾಸ್ಟಿಕ್ ಅಲ್ಲದ ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮವಹಿಸತಕ್ಕದೆಂದು ಹೇಳಿದ್ದಾರೆ.

Also Read  ರಾಜ್ಯಪಾಲರಿಂದ ಸರ್ಕಾರದ 6 ಮಸೂದೆ ರಿಜೆಕ್ಟ್..!

ಆದರೆ, ಇತ್ತೀಚಿನ ದಿನಗಳಲ್ಲಿ ಸರ್ಕಾರದ ವತಿಯಿಂದ ಅಥವಾ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ-ಸಮಾರಂಭಗಳಲ್ಲಿ ಮೇಲಿನ ಉಲ್ಲೇಖಿತ ಸರ್ಕಾರದ ಆದೇಶದ ಸೂಚನೆಯನ್ನು ಪಾಲಿಸುತ್ತಿಲ್ಲ ಎಂಬುದನ್ನು ಗಮನಿಸಲಾಗಿದ್ದು ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಪ್ಲಾಸ್ಟಿಕ್ ಬಾಟಲಿಗಳಲ್ಲಿ ವಿತರಿಸುತ್ತಿರುವುದು ಸಮರ್ಥನೀಯವಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

Also Read  ಕಲ್ಲು ಕ್ವಾರಿಯಲ್ಲಿ ಸ್ಪೋಟ ಸಂಭವಿಸಿ, ಕೂಲಿ ಕಾರ್ಮಿಕ ಮೃತ್ಯು.!

error: Content is protected !!
Scroll to Top