(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ನವ ಮಂಗಳೂರು ಬಂದರು ಟ್ರಸ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1 ಎಂಜಿನಿಯರ್ ಗ್ರೇಡ್-2 ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ನವೆಂಬರ್ 21, 2023ರಂದು ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು.
ಹುದ್ದೆಯ ಕುರಿತು ಮಾಹಿತಿ:-
ಸಂಸ್ಥೆ- ನವ ಮಂಗಳೂರು ಬಂದರು ಟ್ರಸ್ಟ್,
ಹುದ್ದೆ- ಎಂಜಿನಿಯರ್ ಗ್ರೇಡ್-2
ಒಟ್ಟು ಹುದ್ದೆ- 1
ವೇತನ:
ನವ ಮಂಗಳೂರು ಬಂದರು ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 60,000 ಸಂಬಳ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ನವ ಮಂಗಳೂರು ಬಂದರು ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಸಂದರ್ಶನ ನಡೆಯುವ ಸ್ಥಳ:
ಚೇಂಬರ್ ಆಫ್ ದಿ ಡೆಪ್ಯುಟಿ ಚೇರ್ಮನ್
ನವ ಮಂಗಳೂರು ಬಂದರು ಪ್ರಾಧಿಕಾರ
ಪಣಂಬೂರು
ಮಂಗಳೂರು
ಕರ್ನಾಟಕ-575010.
ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 0824-2887265 ಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.