ಉದ್ಯಮಿಗೆ ವಂಚನೆ ಪ್ರಕರಣ – ಸ್ವಾಮೀಜಿಗೆ 10 ದಿನಗಳ ಸಿಸಿಬಿ ಕಸ್ಟಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಉದ್ಯಮಿಗೆ ಟಿಕೆಟ್ ಕೊಡಿಸುವುದಾಗಿ ವಂಚಿಸದ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಒಡಿಶಾದಲ್ಲಿ ಸಿಕ್ಕಿಬಿದ್ದ ಹಾಲಶ್ರೀ ಸ್ವಾಮೀಜಿಯನ್ನು 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ.

ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್‌ ಕೊಡಿಸುತ್ತೇವೆಂದು ನಂಬಿಸಿ ಐದು ಕೋಟಿ ರೂಪಾಯಿ ವಂಚನೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಮೊದಲ ಆರೋಪಿಯಾದರೆ, ಹಾಲಶ್ರೀ ಸ್ವಾಮೀಜಿ ಮೂರನೇ ಆರೋಪಿಯಾಗಿದ್ದ ಸ್ವಾಮೀಜಿ ಒಂದೂವರೆ ಕೋಟಿ ರೂಪಾಯಿ ಪಡೆದಿದ್ದರು ಎನ್ನಲಾಗಿದೆ.

ಚೈತ್ರಾ ಕುಂದಾಪುರ ಸೇರಿ ಇತರ ಏಳು ಆರೋಪಿಗಳನ್ನು ವಾರದ ಹಿಂದೆ ಬಂಧಿಸಲಾಗಿತ್ತು. ಆದರೆ ಚೈತ್ರಾ ಬಂಧನವಾಗುತ್ತಿದ್ದಂತೆಯೇ ಹಾಲಶ್ರೀ ಸ್ವಾಮೀಜಿ ನಾಪತ್ತೆಯಾಗಿ, ವೇಷ ಬದಲಿಸಿಕೊಂಡು ಓಡಾಡುತ್ತಿದ್ದರು. ನಿನ್ನೆ ಒಡಿಶಾ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಹಾಲಶ್ರೀಯನ್ನು ಬಂಧಿಸಲಾಗಿತ್ತು. ಬೆಂಗಳೂರಿಗೆ ಕರೆತಂದು ಪೊಲೀಸರು ಇಂದು ಕೋರ್ಟ್‌ ಮುಂದೆ ಹಾಜರುಪಡಿಸಿದ್ದು, ಕೋರ್ಟ್‌ ಶ್ರೀಗಳಿಗೆ ಹತ್ತು ದಿನಗಳ ಸಿಸಿಬಿ ಕಸ್ಟಡಿ ವಿಧಿಸಿದೆ.

Also Read  ಬೆಂಗಳೂರು: ಹೆಚ್ಚಿದ ಡೆಂಗ್ಯೂ, ಝಿಕಾ ವೈರಸ್ ಆತಂಕ  ➤ ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ     

error: Content is protected !!
Scroll to Top