ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರಾಗಿ ರಮೇಶ್ ಪಾಳ್ಯ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಈ ಸಂಜೆ ಪತ್ರಿಕೆಯ ಹಿರಿಯ ವರದಿಗಾರ ರಮೇಶ್ ಎಂ.ಪಾಳ್ಯ ಅವರು ಆಯ್ಕೆಯಾಗಿದ್ದಾರೆ.

ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ರಮೇಶ್‍ ಪಾಳ್ಯ ಅವರು 7 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ವಿನೋದ್‍ ಕುಮಾರ್ ಅವರನ್ನು ಒಂದು ಮತಗಳ ಅಂತರದಿಂದ ಸೋಲಿಸಿದ್ದಾರೆ. ಉಪಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ಅವರು ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಹಿರಿಯ ಛಾಯಾಗ್ರಾಹಕ ಮೋಹನ್‍ ಕುಮಾರ್ ಆಯ್ಕೆಯಾಗಿದ್ದಾರೆ.

Also Read  ಮೆಲ್ಕಾರ್ ಶುಕ್ರವಾರ ನಡೆದ ಅಪಘಾತ ಪ್ರಕರಣ ➤ಗಾಯಗೊಂಡಿದ್ದ ಬೈಕ್ ಸವಾರ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

error: Content is protected !!
Scroll to Top