ಕಾವೇರಿ ಪರ ಧ್ವನಿ ಎತ್ತಿದ ನಟ ದರ್ಶನ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಕನ್ನಡ ಪರ ಹೋರಾಟಗಾಗರು ಖಂಡಿಸಿದ್ದು, ಇದೀಗ ಸ್ಯಾಂಡಲ್ ವುಡ್ ನಟ ಚಾಲೆಂಜಿಗ್‌ ಸ್ಟಾರ್‌ ದರ್ಶನ್‌ ಕೂಡಾ ಕಾವೇರಿ ಪರ ಧ್ವನಿ ಎತ್ತಿದ್ದಾರೆ.

ಈ ಕುರಿತು ನಟ ದರ್ಶನ್‌ ಟ್ವೀಟ್‌ ಮಾಡಿದ್ದಾರೆ. ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆಯಿರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ ಎಂದು ದರ್ಶನ್‌ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ. ಈಗಾಗಲೇ 50ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ದರ್ಶನ್ ದೊಡ್ಡ ಅಭಿಮಾನಿಗಳ ಬಳಗ ಸೃಷ್ಟಿಸಿಕೊಂಡಿದ್ದಾರೆ.

Also Read  ಜೂನ್ 15 ರಿಂದ ಮೀನುಗಾರಿಕೆ ನಿಷೇಧ ➤ ಪರಿಷ್ಕೃತ ಆದೇಶ ಪ್ರಕಟ

error: Content is protected !!
Scroll to Top