(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 21. ರಾಜ್ಯ ಸರಕಾದ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಅರಂಭಿಸಿದ ಶಕ್ತಿ ಯೋಜನೆಯು ಯಶಸ್ವಿಯಾಗಿ 100 ದಿನ ಪೂರ್ಣಗೊಳಿಸಿದೆ.
ಜೂನ್ 11ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿತ್ತು. 100 ದಿನದಲ್ಲಿ ರಾಜ್ಯ ಸಾರಿಗೆ ಬಸ್ ಗಳಲ್ಲಿ 62.55 ಕೋಟಿಗೂ ಅಧಿಕ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಈ ಪ್ರಯಾಣ ದರದ ಒಟ್ಟು ಮೊತ್ತ 1,456 ಕೋಟಿ ರೂ. ಆಗಿದೆ.
ಜೂನ್ 11 ರಿಂದ ಸೆಪ್ಟೆಂಬರ್ 19ರ ವರೆಗೆ ಕೆಎಸ್‌ಆರ್ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯ ಸಾರಿಗೆ ನಿಗಮದ ಬಸ್ ಗಳಲ್ಲಿ ಉಚಿತವಾಗಿ 62,55,39,727 ಮಹಿಳೆಯರು ಪ್ರಯಾಣಿಸಿದ್ದಾರೆ. ಕೆಎಸ್‌ಆರ್‌ಟಿಸಿ 18.5 ಕೋಟಿ ಮಹಿಳೆಯರು ಪ್ರಯಾಣಿಸಿದ್ದು, ಟಿಕೆಟ್ ಮೊತ್ತ 541 ಕೋಟಿ ರೂ. ಆಗಿದೆ. ಬಿಎಂಟಿಸಿಯಲ್ಲಿ 21 ಕೋಟಿ ಮಹಿಳೆಯರು ಪ್ರಯಾಣಿಸಿದ್ದು, ಟಿಕೆಟ್ ಮೊತ್ತ 264 ಕೋಟಿ ರೂ. ಆಗಿದೆ. ಕಲ್ಯಾಣ ಕರ್ನಾಟಕ ಸಾರಿಗೆ 8.5 ಕೋಟಿ ಮಹಿಳೆಯರು ಪ್ರಯಾಣಿಸಿದ್ದು, ಟಿಕೆಟ್ ಮೊತ್ತ 282 ಕೋಟಿ ರೂಪಾಯಿ ಆಗಿದೆ. NWKRTCಯಲ್ಲಿ 14.5 ಕೋಟಿ ಮಹಿಳೆಯರು ಪ್ರಯಾಣಿಸಿದ್ದು, ಟಿಕೆಟ್ ಮೊತ್ತ 368 ಕೋಟಿ ರೂಪಾಯಿ ಆಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.