ಕೌನ್ ಬನೇಗಾ ಕರೋಡ್ ಪತಿ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಕೌನ್‌ ಬನೇಗಾ ಕರೋಡ್‌ ಪತಿಯಲ್ಲಿ 25 ಲಕ್ಷ ರೂ. ಗೆದ್ದಿರುವುದಾಗಿ ಹೇಳಿ ಮಹಿಳೆಗೆ 12.93 ಲಕ್ಷ ರೂ. ವಂಚಿಸಿದ ಕುರಿತು ಪುತ್ತೂರಿನಿಂದ ವರದಿಯಾಗಿದೆ.


ಪುತ್ತೂರು ನಿವಾಸಿ ಝೀನತ್‌ ಬಾನು ಎಂಬವರಿಗೆ 2022ನೇ ಮೇ ತಿಂಗಳಲ್ಲಿ ಅಪರಿಚಿತ ವ್ಯಕ್ತಿಯೋರ್ವ ವಾಟ್ಸಾಪ್ ಮೂಲಕ ಕರೆ ಮಾಡಿ ತಾನು ಕೌನ್‌ ಬನೇಗಾ ಕರೋಡ್‌ ಪತಿ ಕಾರ್ಯಕ್ರಮದಿಂದ ಕರೆ ಮಾಡುತ್ತಿರುವುದಾಗಿ ಹೇಳಿ ನೀವು 25 ಲಕ್ಷ ರೂ. ಲಾಟರಿ ಗೆದ್ದಿರುವುದಾಗಿ ತಿಳಿಸಿದ್ದಾನೆ.

ಅನಂತರ ಆ ಹಣವನ್ನು ಪಡೆಯಬೇಕಾದರೆ ತೆರಿಗೆ ಹಾಗೂ ಇನ್ನಿತರ ಶುಲ್ಕಗಳ ನೆಪ ಹೇಳಿ 2022ರ ಮೇ ತಿಂಗಳಿನಿಂದ 2023 ಸೆಪ್ಟಂಬರ್‌ 13ರ ವರೆಗೆ ವಿವಿಧ ಬ್ಯಾಂಕ್‌ ಖಾತೆಗಳಲ್ಲಿದ್ದ 12,93,200 ರೂ. ವರ್ಗಾಯಿಸಿಕೊಂಡು ವಂಚಿಸಿದ್ದಾನೆ. ಈ ಕುರಿತು ದೂರು ದಾಖಲಿಸಲಾಗಿದೆ.

Scroll to Top