ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ 7 ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಜಾಲ್‌ ಫೈಜಲ್‌ ನಗರದ ತಲ್ಲತ್‌ (39) ಎಂಬಾತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ ಎಂದು ನಗರ ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್‌ ತಿಳಿಸಿದ್ದಾರೆ.

ಆರೋಪಿ ತಲ್ಲತ್‌ 2004ರಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ. ನಂತರ ಮಂಗಳೂರು ಗ್ರಾಮಾಂತರ, ಕಂಕನಾಡಿ ನಗರ, ಕೊಣಾಜೆ, ಬರ್ಕೆ, ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಹಲ್ಲೆ, ಜೀವ ಬೆದರಿಕೆ, ಹಫ್ತಾ ವಸೂಲಿ, ದರೋಡೆ, ಕೊಲೆ ಯತ್ನ, ಕೊಲೆ, ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ, ಅಪಹರಣ ಹೀಗೆ ಒಟ್ಟು 28 ಪ್ರಕರಣಗಳಲ್ಲಿ ಆರೋಪಿಯಾಗಿದ್ದನು. ಮುಂಬೈನ ಠಾಣೆಯಲ್ಲೂ ಈತನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ನ್ಯಾಯಾಲಯದಿಂದ ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಎಂದು ಅವರು ಮಾಹಿತಿ ನೀಡಿದ್ದಾರೆ.

Also Read  ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ ➤ ಮೇ ತಿಂಗಳಲ್ಲಿ 24 ಪ್ರಕರಣ ದಾಖಲು

 

error: Content is protected !!
Scroll to Top