ಮಂಗಳೂರು: ಸೆ. 25 ರಂದು ಜನತಾ ದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಇದೇ ಸೆ. 25ರ ಸೋಮವಾರ ಬೆಳಗ್ಗೆ 10 ಗಂಟೆಗೆ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಹೊಂಚು ಹಾಕಿ ಕದಿಯುತ್ತಿದ್ದ ಕಳ್ಳನನ್ನು ಹೊಂಚು ಹಾಕಿ ಹಿಡಿದ ಊರವರು ➤ ಸುಳ್ಯದಲ್ಲಿ ನಡೆಯಿತು ಸ್ವಾರಸ್ಯಕರ ಘಟನೆ | ಮುಂದೇನಾಯ್ತು ಗೊತ್ತೇ..⁉️

error: Content is protected !!
Scroll to Top