ರಾಜ್ಯದಲ್ಲಿ ಬರದ ಪರಿಸ್ಥಿತಿ- ಈ ಬಾರಿ ಸರಳ ದಸರಾ ಆಚರಣೆಗೆ ನಿರ್ಧರಿಸಿದ ಸರಕಾರ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 22. ರಾಜ್ಯದಲ್ಲಿ ಬರದ ಪರಿಸ್ಥಿತಿ ತಲೆದೋರುವ ಹಿನ್ನೆಲೆ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಸರಳವಾಗಿ ಆಚರಿಸಲು ರಾಜ್ಯ ಸರಕಾರ ಗುರುವಾರದಂದು ತೀರ್ಮಾನಿಸಿದೆ.


ಈ ಕುರಿತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗವು ಸಂಕಷ್ಟದಲ್ಲಿದೆ. ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಿಲು ಸರ್ಕಾರ ನಿರ್ಧರಿಸಿದೆ. ರೈತರ ಸಂಕಷ್ಟದ ಸಂದರ್ಭಕ್ಕೆ ಪೂರಕವಾಗಿ ಸರ್ಕಾರವು ಈ ಭಾರಿ ಸರಳ ದಸರಾ ಆಚರಿಸಲಿದೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

Also Read  ಧರ್ಮಸ್ಥಳ: ಶ್ರೀ ಗುರುದೇವಮಠ ದೇವರಗುಡ್ಡೆ ಅಭಿವೃದ್ಧಿ ಕಾರ್ಯಕ್ಕಾಗಿ ಸರಕಾರದಿಂದ ರೂ. 1 ಕೋಟಿ ಅನುದಾನ

error: Content is protected !!
Scroll to Top