ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ರಾಯಚೂರು, ಸೆ. 22. ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನಗರದ ತಿಮ್ಮಾಪುರಪೇಟೆ ಬಡಾವಣೆಯಲ್ಲಿ ನಡೆದಿದೆ.

ಮೃತ ಯುವಕನನ್ನು ಭರತನಗರ ನಿವಾಸಿ ರಮೇಶ(19) ಎಂದು ಗುರುತಿಸಲಾಗಿದೆ. ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ರಮೇಶ ಸ್ನೇಹಿತನ ಮನೆಗೆ ಬಂದಿದ್ದು, ಮಹಡಿ ಮೇಲೆ ಮಲಗಿದ್ದರು. ನಿದ್ದೆಯ ಮಂಪರಿನಲ್ಲಿ ಆಯತಪ್ಪಿ ಕೆಳಗೆ ಬಿದ್ದಿರಬಹುದು ಎಂದು ಹೇಳಲಾಗಿದೆ. ಸ್ಥಳಕ್ಕೆ ನೇತಾಜಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಕಾರಿನಲ್ಲಿ ಬಂದ ಮುಸುಕುಧಾರಿಗಳಿಂದ ಟೆಂಪೋ ಅಡ್ಡಗಟ್ಟಿ ನಗದು ದರೋಡೆ ➤ ವ್ಯಕ್ತಿಗೆ ತಲವಾರಿನಿಂದ ಹಲ್ಲೆ...!

error: Content is protected !!
Scroll to Top